Wed. Feb 5th, 2025

Kadaba: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ಬೈಕ್ ಸವಾರನಿಗೆ ಗಂಭೀರ ಗಾಯ!!!

ಕಡಬ:(ಫೆ.5) ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ.

ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅವರು ಬರುತ್ತಿದ್ದಾಗ ಈ ಘಟನೆ ನಡೆದಿದೆ.


ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು