Wed. Feb 5th, 2025

Mundaje: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ:(ಫೆ.5) ಮುಂಡಾಜೆ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ದ್ವಿತೀಯ ಪಿಯುಸಿ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಇದನ್ನೂ ಓದಿ: Ramanagara: ಮಾನಸಿಕ ಒತ್ತಡಕ್ಕೆ ಒಳಗಾಗಿ 19 ರ ಯುವತಿ ಆತ್ಮಹತ್ಯೆ

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ಶ್ರೀ ವಿನಯಚಂದ್ರ ಇವರು, ‘ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಬೇಕು, ಅವಕಾಶಗಳ ಸದ್ಬಳಕೆಯಿಂದ ವಿಕಸಿತ ಭಾರತದ ನಿರ್ಮಾಣ ಸಾಧ್ಯ’ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ, ಅವರು ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಮೂಲಕ ಕೈಗೊಳ್ಳಬಹುದಾದ ಸಮಾಜಮುಖಿ ಕೆಲಸಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ರೇಂಜರ್ ಲೀಡರ್ ವಸಂತಿ ನಾಯ್ಕ್ ಉಪಸ್ಥಿತರಿದ್ದರು. ಪ್ರಥಮ ಪಿಯುಸಿಯ ರೇಂಜರ್ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು