ಬಂಟ್ವಾಳ:(ಫೆ.8) ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ
ಜನತಾದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯು ಪೂರ್ವಾನುಮತಿ ಪಡೆಯದೆ ಗೈರು ಹಾಜರಾಗಿದ್ದರು.



ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

