ಬಂಟ್ವಾಳ:(ಫೆ.8) ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪದಲ್ಲಿ ನಡೆದಿದೆ. ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಉಜಿರೆ: ಮರು ಬಳಕೆಯಾಗದ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿ ಡಾಮರು ರಸ್ತೆ ನಿರ್ಮಾಣಕ್ಕೆ ಪ್ರಾಯೋಗಿಕ ಚಾಲನೆ
ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ.

ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದ. ಈತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



