ಬೆಂಗಳೂರು(ಫೆ.08): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಸಿನಿಮಾ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿ: ಮಿತ್ತಬಾಗಿಲು: ಕಾಡು ಹಂದಿ ಬೇಟೆ
ಗಿರಿ ದಿನೇಶ್ ನವಗ್ರಹ ಸಿನಿಮಾದ ಮೂಲಕ ಖ್ಯಾತಿಯನ್ನು ಗಳಿಸಿದ್ದರು. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಗಿರಿ ದಿನೇಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ.

ಗಿರಿ ದಿನೇಶ್ ಅವರು ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಹೆಚ್ಚಿನ ಹೆಸರು ತಂದುಕೊಟ್ಟಿತ್ತು. ದಿನಕರ್ ನಿರ್ದೇಶನದ ನವಗ್ರಹ ಚಿತ್ರವನ್ನು ಮೀನಾ ತೂಗುದೀಪ ನಿರ್ಮಾಣ ಮಾಡಿದ್ದರು. ಈ ಚಿತ್ರ 2008ರಲ್ಲಿ ಬಿಡುಗಡೆಯಾಗಿತ್ತು. ಕಳೆದ ವರ್ಷ ನವೆಂಬರ್ 8ರಂದು ಮರುಬಿಡುಗಡೆಯಾಗಿತ್ತು.



