Sun. Feb 23rd, 2025

Bengaluru: ನವಗ್ರಹ ಸಿನಿಮಾದ “ಶೆಟ್ಟಿ” ಖ್ಯಾತಿಯ ನಟ ಗಿರಿ ದಿನೇಶ್​ ನಿಧನ

ಬೆಂಗಳೂರು(ಫೆ.08): ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಅಭಿನಯದ ನವಗ್ರಹ ಸಿನಿಮಾ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿ: ಮಿತ್ತಬಾಗಿಲು: ಕಾಡು ಹಂದಿ ಬೇಟೆ

ಗಿರಿ ದಿನೇಶ್​ ನವಗ್ರಹ ಸಿನಿಮಾದ ಮೂಲಕ ಖ್ಯಾತಿಯನ್ನು ಗಳಿಸಿದ್ದರು. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್​ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಗಿರಿ ದಿನೇಶ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ.

ಗಿರಿ ದಿನೇಶ್​ ಅವರು ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಹೆಚ್ಚಿನ ಹೆಸರು ತಂದುಕೊಟ್ಟಿತ್ತು. ದಿನಕರ್​ ನಿರ್ದೇಶನದ ನವಗ್ರಹ ಚಿತ್ರವನ್ನು ಮೀನಾ ತೂಗುದೀಪ ನಿರ್ಮಾಣ ಮಾಡಿದ್ದರು. ಈ ಚಿತ್ರ 2008ರಲ್ಲಿ ಬಿಡುಗಡೆಯಾಗಿತ್ತು. ಕಳೆದ ವರ್ಷ ನವೆಂಬರ್​ 8ರಂದು ಮರುಬಿಡುಗಡೆಯಾಗಿತ್ತು.

Leave a Reply

Your email address will not be published. Required fields are marked *