ಕನ್ಯಾಡಿ :(ಫೆ.8) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಯಲ್ಲಿ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಫೆ.7 ರಂದು ರಚನೆ ಮಾಡಲಾಯಿತು.

ಇದನ್ನೂ ಓದಿ: Kanyadi: ಕನ್ಯಾಡಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
18 ಪೋಷಕ ಪ್ರತಿನಿಧಿಗಳನ್ನೊಳಗೊಂಡ ಈ ಸಮಿತಿಯ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಕೆ. ನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಆಯ್ಕೆಯಾಗಿರುತ್ತಾರೆ.

ಈ ಸಮಿತಿಯ ರಚನೆಯನ್ನು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ ಇವರ ನೇತೃತ್ವದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಗೌರವ ಸಲಹೆಗಾರರಾದ ಶ್ರೀಯುತ ರಾಜೇಂದ್ರ ಅಜ್ರಿ , ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ.ಕೆ. ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿದರು.


