Sun. Feb 23rd, 2025

Mangalore: ಮಂಗಳೂರಿನ ಯುವಕ ಹಾಗೂ ಕೇರಳದ ಅರ್ಚಕನ ನಡುವೆ ಸೆ#ಕ್ಸ್‌ ಚಾಟ್‌ – ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋ ಮುಂದಿಟ್ಟುಕೊಂಡು ಅರ್ಚಕನಿಗೆ 10 ಲಕ್ಷ ಪಂಗನಾಮ – ಮಂಗಳೂರಿನ ಅಶ್ವಥ್ ಆಚಾರ್ಯ ಅರೆಸ್ಟ್!!

ಮಂಗಳೂರು:(ಫೆ.8) ಮಂಗಳೂರಿನ ಯಕ್ಷಗಾನ ಕಲಾವಿದನೋರ್ವ ಕೇರಳದ ಅರ್ಚಕನೊಂದಿಗೆ ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು , ಅರ್ಚಕನನ್ನು ಲೈಂಗಿಕವಾಗಿ ಸೆಳೆದುಕೊಂಡು ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನು ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್‌ ಮಾಡಿದ ಘಟನೆ ನಡೆದಿದೆ. ಈ ಆರೋಪದಲ್ಲಿ ವ್ಯಕ್ತಿಯನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Dhananjay : ಮದುವೆಗೆ ಎಲ್ಲರನ್ನೂ ಕರೆದು ದರ್ಶನ್‌ ನನ್ನೇ ಕರೆಯದ ಡಾಲಿ ಧನಂಜಯ್ !!

ಮ0ಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33) ಬಂಧಿತ ವ್ಯಕ್ತಿ.

ಅಶ್ವತ್ ಆಚಾರ್ಯ ಫೇಸ್ ಬುಕ್‌ನಲ್ಲಿ ಕಾಸರಗೋಡು ಮೂಲದ ಅರ್ಚಕರೊಬ್ಬರೊಂದಿಗೆ ತಾನು ಯಕ್ಷಗಾನ ಕಲಾವಿದ ಎಂದು ಪರಿಚಯಿಸಿಕೊಂಡು ಫ್ರೆಂಡ್ ಆಗಿದ್ದ. ಬಳಿಕ ಇಬ್ಬರೂ ಆನ್‌ಲೈನ್‌ನಲ್ಲಿ ಸಂಪರ್ಕದಲ್ಲಿದ್ದು, ಲೈಂಗಿಕವಾಗಿ ಆಕರ್ಷಿಸಿ ಸೆಕ್ಸ್ ಸಂಬಂಧಿಸಿ ಇಬ್ಬರೂ ಚಾಟ್ ಮಾಡುತ್ತಿದ್ದರು.

ಇದೇ ವೇಳೆ ಒಬ್ಬರಿಗೊಬ್ಬರು ಫೋಟೋ, ವಿಡಿಯೋ ಶೇರ್ ಮಾಡಿಕೊಂಡಿದ್ದು, ಇದನ್ನೇ ಮುಂದಿಟ್ಟು ಅರ್ಚಕನನ್ನು ಅಶ್ವಥ್ ಆಚಾರ್ಯ ಬ್ಲಾಕ್ ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ತಾನು ಯುವತಿಯಾಗಿ ಲಿಂಗ ಬದಲಾಯಿಸಿಕೊಳ್ಳುತ್ತೇನೆ, ಅದಕ್ಕಾಗಿ ಅಗತ್ಯವಿದೆ ಎಂದೂ ನಂಬಿಸಿದ್ದಾನೆ.

ಹಣದ ಬ್ಲಾಕ್ ಮೇಲ್‌ ಗೆ ಒಳಗಾದ ಅರ್ಚಕ ಕಳೆದ ನವೆಂಬರ್ ತಿಂಗಳಿನಿ0ದ 10.50 ಲಕ್ಷ ರೂ. ಹಣವನ್ನು ಮೊಬೈಲ್ ಆಪ್ ಮತ್ತು ಬ್ಯಾಂಕ್ ಮೂಲಕ ಆರೋಪಿ ಖಾತೆಗೆ ಪಾವತಿಸಿದ್ದರು. ಪೌರೋಹಿತ್ಯ ನಡೆಸುತ್ತಿದ್ದ ಅರ್ಚಕನಲ್ಲಿ ಮತ್ತಷ್ಟು ಹಣ ನೀಡದಿದ್ದರೆ ವಿಡಿಯೋ, ಫೋಟೊ ಜಾಲತಾಣದಲ್ಲಿ ಹಾಕುತ್ತೇನೆಂದು ಬೆದರಿಸಿದ್ದಾನೆ. ಇದರಿಂದ ಬೇಸತ್ತ ಅರ್ಚಕ ಫೆ.5ರಂದು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ, ಕಾಸರಗೋಡು ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದ ಪೊಲೀಸರು ಆರೋಪಿಯನ್ನು ಮಂಗಳೂರಿನ ಮನೆಯಿಂದಲೇ ನಡುರಾತ್ರಿಯಲ್ಲಿ ಬಂಧಿಸಿ ಕರೆದೊಯ್ದಿದ್ದಾರೆ.

ಅರ್ಚಕ 3 ಲಕ್ಷವನ್ನು ಗೂಗಲ್ ಪೇಯಲ್ಲಿ ಪಾವತಿಸಿದ್ದರೆ, 7.5 ಲಕ್ಷವನ್ನು ಹಂತಹ0ತವಾಗಿ ಮೂರು ಬಾರಿ ಬ್ಯಾಂಕ್ ಖಾತೆ ಮೂಲಕ ಪಾವತಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬೇರೆಯವರನ್ನೂ ಬ್ಲಾಕ್‌ ಮೇಲ್ ಮಾಡಿದ್ದಾನೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *