ಪುತ್ತೂರು:(ಫೆ.8) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ತೊಡಕು ಉಂಟಾಗಿದ್ದರಿಂದ ಕೋಟಿ ಚೆನ್ನಯ ಕಂಬಳ ಸಮಿತಿಯವರು ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಬಂಟ್ವಾಳ: ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ದೇವಸ್ಥಾನದ ಅಭಿವೃದ್ಧಿಗೆ ತೊಡಕು ಉಂಟುಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು, ವ್ಯವಸ್ಥಾಪನ ಸಮಿತಿಗೆ ದೂರು ದಾಖಲಿಸಿದದವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿವರಾಂ ಆಳ್ವ ಮತ್ತಿತರರು ಉಪಸ್ಥಿತರಿದ್ದರು.



