Andhra Pradesh:(.ಫೆ.10) ತಿರುಪತಿ ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ.

ಇದನ್ನೂ ಓದಿ: ಕನ್ಯಾಡಿ: ದ.ಕ ಜಿಲ್ಲೆಯ ಮಾನ್ಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ
ತಿರುಪತಿ ದೇವಸ್ಥಾನದಲ್ಲಿ ತುಪ್ಪ ಪೂರೈಕೆಯ ಸಮಯದಲ್ಲಿ ಗಂಭೀರ ಉಲ್ಲಂಘನೆಗಳು ಕಂಡುಬಂದಿದ್ದು, ಪ್ರತಿ ಹಂತದಲ್ಲೂ ಅಕ್ರಮಗಳು ನಡೆದಿವೆ ಎಂದು ಟಿಟಿಡಿ ಮೂಲಗಳು ತಿಳಿಸಿದ್ದವು. ಅಂತೆಯೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು.

ಸದ್ಯ ತನಿಖಾಧಿಕಾರಿಗಳು ಅಪರಾಧ ಸಂಖ್ಯೆ 470/24 ರ ಅಡಿಯಲ್ಲಿ ಆರೋಪಿಗಳನ್ನು ತಿರುಪತಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಂಧಿತರಲ್ಲಿ ಭೋಲೆ ಬಾಬಾ ಡೈರಿ , ಮಾಜಿ ನಿರ್ದೇಶಕರಾದ ಬಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಸೇರಿದ್ದಾರೆ.



