ಬಂದಾರು:(ಫೆ.10) ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು.

ಇದನ್ನೂ ಓದಿ: ಬೆಳಾಲು : 1000 ಯುವ ಜನತೆಯಿಂದ ಏಕಕಾಲದಲ್ಲಿ ಅನಂತೋಡಿಯಲ್ಲಿ ಭತ್ತ ಕಟಾವು ಕಾರ್ಯ..!
ಈ ಸಂದರ್ಭದಲ್ಲಿ ಪದ್ಮುಂಜ ಸಿ. ಎ. ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,
ವಕೀಲರಾದ ಉದಯ ಕುಮಾರ್ ಬಿ.ಕೆ, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ, ಶ್ರೀ ಕ್ಷೇತ್ರ ಪಾಣೆಕಲ್ಲು ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸೂರ್ಯನಾರಾಯಣ ಕುಡುಮತ್ತಾಯ, ನೇಮೋತ್ಸವ ಸಮಿತಿ ಅಧ್ಯಕ್ಷರಾದ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ,ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.




