ಚಿಕ್ಕಮಗಳೂರು:(ಫೆ.10) ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ
ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕೊಪ್ಪ ಮೂಲದ ಕುಟುಂಬವೊಂದು ಕಳೆದ ರಾತ್ರಿ ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ ಆಗಮಿಸಿದ್ದರು. ಈ ವೇಳೆ ಹರಿಹರಪುರದಲ್ಲಿ ಇವರಿದ್ದ ಕಾರು ಮತ್ತು ಬೈಕೊಂದರ ಮಧ್ಯೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ.



ಆರೋಪಿಗಳು ಶೃಂಗೇರಿ ಬಸ್ ನಿಲ್ದಾಣದ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಐವರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದೆ ಎಂದು ದೂರಲಾಗಿದೆ. ಹಲ್ಲೆಯಿಂದ ಗಾಯಗೊಂಡವರು ಶೃಂಗೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
