ಉಜಿರೆ:(ಫೆ.10): ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ಕಬ್ ಮತ್ತು ಬುಲ್ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಚರಣ ಪರೀಕ್ಷೆ ನಡೆಸಲಾಯಿತು.

ಇದನ್ನೂ ಓದಿ: ಮಧ್ಯಪ್ರದೇಶ: ಮದುವೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ವೇಳೆ ಹೃದಯಾಘಾತ – ಯುವತಿ ಸಾವು
ಪರೀಕ್ಷಾ ಮೇಲ್ವಿಚಾರಕರಾಗಿ ಬೆಳ್ತಂಗಡಿ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಸೈಂಟ್ ತೆರೇಸಾ ಶಾಲೆಯ ಸ್ಕೌಟ್ ಮಾಸ್ಟರ್ ವಿನ್ಸೆಂಟ್ ಹಾಗೂ ಸ.ಹಿ.ಪ್ರಾ.ಶಾಲೆ ಕರ್ನೋಡಿಯ ಗೈಡ್ ಕ್ಯಾಪ್ಟನ್ ತ್ರಿಷಾಲ ಜೈನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.




ಶಿಕ್ಷಕಿ ಸುಜನ ವಾಲ್ತಾಜೆ ಕಾರ್ಯಕ್ರಮ ನಿರೂಪಿಸಿದರು.
