Sun. Feb 23rd, 2025

ಉಪ್ಪಿನಂಗಡಿ:(ಫೆ.10) ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಂಗಿ ಕಲ್ಯಾಣ ತಾಳಮದ್ದಳೆ ಜರಗಿತು.

ಇದನ್ನೂ ಓದಿ: ತಮಿಳುನಾಡು: ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರಕ್ಕೆ ಯತ್ನ

ಭಾಗವತರಾಗಿ ಪ್ರಕಾಶ ಅಭ್ಯಂಕರ ಬೆಳ್ತಂಗಡಿ, ಕಿಶೋರ್ ಶೆಟ್ಟಿ ಮೂಡಾಯಿರು ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ,ಶ್ರೀಪತಿ ಭಟ್ ಉಪ್ಪಿನಂಗಡಿ,

ಅರ್ಜುನ ಅಭ್ಯಂಕರ್ ಬೆಳ್ತಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ(ಬಲರಾಮ )ಶ್ರೀಧರ ಎಸ್ ಪಿ ಸುರತ್ಕಲ್( ಕೌರವ ) ಹರೀಶ ಆಚಾರ್ಯ ಬಾರ್ಯ(ಶ್ರೀಕೃಷ್ಣ )ಪೂರ್ಣಿಮಾ ರಾವ್ ಬೆಳ್ತಂಗಡಿ(ಅಕ್ರೂರ, ನಾರದ )ಶ್ರುತಿ ವಿಸ್ಮಿತ್ ಬಲ್ನಾಡು(ಘಟೋತ್ಕಚ) ಭಾಗವಹಿಸಿದ್ದರು.

ಕುಮಾರಿ ಶ್ರಾಗ್ವಿ ಆಚಾರ್ಯ ಮೂಡಬಿದಿರೆ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು. ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ವಂದಿಸಿದರು.

Leave a Reply

Your email address will not be published. Required fields are marked *