ಗಂಡಿಬಾಗಿಲು:(ಫೆ.11) ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ದಿನಾಂಕ:11.02.2025ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025
ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ,

ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.
60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಶೀಯುತ ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು,


ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
