ಉಡುಪಿ:(ಫೆ.11) ಅಕ್ರಮವಾಗಿ ಕೋಣ ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನ ಅಪಘಾತಕ್ಕೀಡಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಇದನ್ನೂ ಓದಿ: ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025
ಉಡುಪಿ ನಗರದ ಅಂಬಾಗಿಲಿನಲ್ಲಿ ವಿದ್ಯುತ್ ಕಂಬಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದ ವೇಳೆ ಪಿಕಪ್ ವಾಹನವನ್ನು ಪರಿಶೀಲಿಸಿದಾಗ ಏಳು ಕೋಣಗಳು ಇರುವುದು ಪತ್ತೆಯಾಗಿವೆ.



ಬೆಳಗಾವಿಯಿಂದ ಮಂಜೇಶ್ವರಕ್ಕೆ ಅಕ್ರಮವಾಗಿ ಕೋಣಗಳನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದ್ದು, ವಾಹನದಲ್ಲಿದ್ದ ಇಬ್ಬರ ಪೈಕಿ ಓರ್ವ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು,ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
