ಬಂಟ್ವಾಳ:(ಫೆ.12) ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೋರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ: ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಡಿಕ್ಕಿ ಹೊಡೆದ ಲಾರಿ
ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ.


ಜೀವನ್ ಅವರು ಆಗಾಗ ಸ್ನೇಹಿತ ರೊಂದಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಜೀವನ್ ತಾವ್ರೋ ಅವರಿಗೆ ಅಗಾಗ ಕಾಲ್ ಮೆಸೇಜ್ ಬರುತ್ತಿದ್ದು,

ಅದೇ ಕಾರಣಕ್ಕಾಗಿ ಖಿನ್ನತೆಗೊಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

