ಬೆಳ್ತಂಗಡಿ:(ಫೆ.13) ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2025-26ರ ಸಾಲಿನ ಪದಪ್ರಧಾನ ಸಮಾರಂಭವು

ಇದನ್ನೂ ಓದಿ: ಕೈಕಂಬ: ಫಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿ
ಇದೇ ಬರುವ ದಿನಾಂಕ 16.02.2025 ನೇ ಆದಿತ್ಯವಾರದಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಲಿರುವುದರಿಂದ ಕಾರ್ಯಕ್ರಮದ ಯಶಸ್ಸಿಗಾಗಿ ಪೂರ್ವಭಾವಿ ಸಭೆಯು ದಿನಾಂಕ 12.02.2025 ಬುಧವಾರದಂದು ನಡೆಯಿತು.


ಸಭೆಯಲ್ಲಿ ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ ವಹಿಸಿದ್ದರು.


ವೇದಿಕೆಯಲ್ಲಿ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ನಿಯೋಜಿತ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿ ಯಶೋಧರ ಮುಂಡಾಜೆ, ನಿಯೋಜಿತ ಕಾರ್ಯದರ್ಶಿ ಮಧುರ ರಾಘವ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕರಾದ ಲೀಲಾವತಿ ಪಣಕಜೆ, ಮಾಜಿ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಅಶ್ವತ್ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
