ಕೈಕಂಬ:(ಪೆ.13) ಪೊಳಲಿ-ಅಡ್ಡೂರು ಫಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇದಕ್ಕೆ ಬೇಕಾದ ಸಾಮಾಗ್ರಿಗಳನ್ನು ತರಲು ನದಿಗೆ ಮಣ್ಣು ಹಾಕಿ ತಾತ್ಕಾಲಿಕ ರಸ್ತೆ ನಿರ್ಮಿಸಿದ್ದು,



ಇದಕ್ಕೆ ದೊಡ್ಡಕಲ್ಲು ಜಲ್ಲಿ ಕಲ್ಲು ತಂದು ಹಾಕಿ ಟಿಪ್ಪರನ್ನು ಹಿಂದಕ್ಕೆ ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಸುಮಾರು 10 ಅಡಿಯಷ್ಟು ನದಿ ನೀರಿಗೆ ಮಗುಚಿ ಬಿದ್ದಿದೆ.

ಪರಿಣಾಮ ಟಿಪ್ಪರ್ ನ ನಾಲ್ಕು ಚಕ್ರಗಳು ಮೇಲ್ಮುಖವಾಗಿ ಬಿದ್ದಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ನದಿಯಲ್ಲಿ ನೀರು ಕೂಡ ತುಂಬಿತ್ತು ಎನ್ನಲಾಗಿದೆ.
