ಮಂಗಳೂರು :(ಫೆ.14) ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಇನ್ನು ಮು೦ದೆ ನ್ಯಾಯಾಲಯದಲ್ಲಿ ದಾವೆ ಹೂಡಬೇಕಾಗಿಲ್ಲ
ಆದರೆ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ನಡೆದಿದೆ.
ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ ರೋಷನ್ ಮೋರನ್ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಎಲೆಕ್ಟ್ರಿಷಿಯನ್ ಆಗಿದ್ದು, ರೋಷನ್ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯವಾಗಿತ್ತು.


ತಕ್ಷಣ ಸ್ಥಳೀಯರು ಮಂಗಳೂರು ಸಮೀಪದ ಪಡೀಲ್‌ನ ಆಸ್ಪತ್ರೆಗೆ ಸೇರಿಸಿದ್ದು, ಬಳಿಕ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಫೆ.13 ರಂದು ಸಾವನ್ನಪ್ಪಿದ್ದಾರೆ.
ಘಟನೆಯ ಕುರಿತು ಮಂಗಳೂರಿನ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


