ಪುತ್ತೂರು:(ಫೆ.14) ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಬ್ರಹ್ಮಾವರ ಮೂಲದ ಇಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ
ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು.


ಅವರ ದೂರಿನಂತೆ ನರ್ಮೇಶ್ ಮತ್ತು ಬನ್ನೂರು ನೆಕ್ಕಿಲದ ಪ್ರಸಾದ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ಪೊಲೀಸರು ಬಂಧಿಸಿ ಫೆ.14 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


