ಉಡುಪಿ:(ಫೆ.14) ಬ್ರಹ್ಮಾವರ ಮೂಲದ ಇಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಶಿಶಿಲ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!!
ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್‌ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಬ್ರಹ್ಮಾವರದ ವಿನಯ್ ಕುಮಾರ್ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


ಇದನ್ನೂ ಓದಿ: ಬಳಂಜ: ನವ ವಿವಾಹಿತ, ನಾಲ್ಕೂರು ನಿವಾಸಿ ಕಿರಣ್ ಮೈಸೂರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!!
ವಿನಯ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಾವತಿಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

