ಬಂಟ್ವಾಳ:(ಫೆ.15) ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.

ಇದನ್ನೂ ಓದಿ: ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಅಪಘಾತ ನಡೆದಿದ್ದು, ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟ ಅವಿವಾಹಿತ ಯುವಕನಾಗಿದ್ದಾನೆ.


ಈತನ ಸಂಬಂಧಿ ಮಕ್ಕಳಾದ ತುಷಾರ್,ಭವಿತ್ ಮತ್ತು ಪ್ರದೀಪ್ ಅವರನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ವಾಪಸು ಮನೆಗೆ ಬರುವ ವೇಳೆ ಘಟನೆ ನಡೆದಿದೆ.

ಮನೆಗೆ ಸುಮಾರು 500 ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಚಾಲಕನ ನಿಯಂತ್ರಣ ಕಳೆದ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಚಾಲಕ ರಿಕ್ಷಾ ದ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದಂತೆ ರಿಕ್ಷಾದಲ್ಲಿ ಪ್ರಯಾಣಿಕರಾದ ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಪಾಣೆಮಂಗಳೂರು ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
