Sat. Feb 22nd, 2025

Puttur: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್

ಪುತ್ತೂರು:(ಫೆ.15) ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು.

ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು,

ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

Leave a Reply

Your email address will not be published. Required fields are marked *