ಉಜಿರೆ:(ಫೆ.15) ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭವು ಶಾಲಾ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು.

ಇದನ್ನೂ ಓದಿ: ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ
ಎಲ್.ಕೆ.ಜಿ ಪುಟಾಣಿಗಳ ಪ್ರಾರ್ಥನಾ ನೃತ್ಯದ ನಂತರ ಯು.ಕೆ.ಜಿ. ಪುಟಾಣಿಗಳು ತಮ್ಮ ಮುಗ್ಧ ಮಾತಿನ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೋ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ಶಿಶು ಪಾಲನಾ ಕೇಂದ್ರವನ್ನು ತೆರೆದು ಅದರ ಪ್ರಗತಿಗೆ ಸಹಕಾರವನ್ನಿತ್ತ ಎಲ್ಲರನ್ನೂ ಅಭಿನಂದಿಸಿದರು.




ಮುಂದಕ್ಕೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊರವರು ಬಹುಮಾನ ವಿತರಿಸಿದರು. ತದನಂತರ ಮುಖ್ಯ ಅತಿಥಿಗಳಾದ ಅನುಗ್ರಹ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾದ ಶ್ರೀಮತಿ ರಮ್ಯಾ ಡಿ. ಕೆ ರವರು ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಕ್ಕಳಿಗೆ ಶುಭ ಹಾರೈಸಿದರು.

ಮಕ್ಕಳಿಗೆ ಶುಭ ಹಾರೈಸುತ್ತಾ ಪದವಿ ಪ್ರದಾನ ಗೀತೆಯನ್ನು ಹಾಡಲಾಯಿತು. ಸಮಾರಂಭದ ಆಧ್ಯಕ್ಷರಾದ ವಂ! ಫಾ! ಅಬೆಲ್ ಲೋಬೊರವರು ಆಧ್ಯಕ್ಷೀಯ ಭಾಷಣ ಮಾಡುತ್ತಾ ಕಾರ್ಯಕ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಕ್ಕಳಿಗೆ ಶುಭ ಕೋರಿದರು. ವೇದಿಕೆಯಲ್ಲಿದ್ದ ಎಲ್ಲಾ ಅತಿಥಿ ಅಭ್ಯಾಗತರಿಗೆ ಎಲ್.ಕೆ.ಜಿ ಪುಟಾಣಿಗಳು ಧನ್ಯವಾದವನ್ನಿತ್ತು ಕಾರ‍್ಯಕ್ರಮಕ್ಕೆ ಮೆರುಗನ್ನು ನೀಡಿದರು.


ವಿದ್ಯಾರ್ಥಿ ಸ್ಮಯನ್ ಜೈನ್ ನಿರೂಪಿಸಿದ ಕಾರ್ಯಕ್ರಮದ ನಂತರ ಪುಟಾಣಿ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಆಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷದ ಸಂಘದ ಉಪಾಧ್ಯಕ್ಷರಾದ ಶ್ರೀ ಉಮೇಶ್ ಶೆಟ್ಟಿ, ಸಹಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.

ಎಲ್.ಕೆ.ಜಿ ಮತ್ತು ಯು.ಕೆ.ಜಿ ಸಹಶಿಕ್ಷಕಿಯರಾದ ಶ್ರೀಮತಿ ವಿನ್ನಿ ಮರಿಯ, ಶ್ರೀಮತಿ ರೇಷ್ಮಾ ಡಿ’ಸೋಜ ಹಾಗೂ ಶ್ರೀಮತಿ ಅಕ್ಷತಾರವರು ಕಾರ್ಯಕ್ರಮಕ್ಕೆ ಸಹಕರಿಸಿದರು.
