ಚಿಕ್ಕಮಗಳೂರು:(ಫೆ.17) ಅಳಿಯನೇ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. ಯಮುನಾ(65) ಕೊಲೆಯಾದ ಮಹಿಳೆ. ಅಳಿಯ ಶಶಿಧರ್ ಕೊಲೆಗೈದ ವ್ಯಕ್ತಿ.

ಇದನ್ನೂ ಓದಿ: ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ
ಯಮುನಾ ಅವರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಶಶಿಧರ್ ಪರಾರಿಯಾಗಿದ್ದಾನೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಶಶಿಧರ್ ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕೊಲೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


