Sun. Feb 23rd, 2025

Bengaluru: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

ಬೆಂಗಳೂರು(ಫೆ.18): ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ತನ್ನ 5 ವರ್ಷದ ಮಗಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ : ಮಹಾಕುಂಭಮೇಳದಲ್ಲಿ ರವಿ‌ ಬಂಡಾಜೆ, ದಾಮೋದರ ನಿಡ್ಲೆ, ರಾಘು ಉಜಿರೆ ಮತ್ತು ಗೆಳೆಯರಿಂದ ಪುಣ್ಯಸ್ನಾನ

ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ಮಹಿಳೆ, ಮಗಳು ರೋಷಿಣಿಯನ್ನು ಕೊಲೆ ಮಾಡಿ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ 10 ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಜತೆ ವಿವಾಹವಾಗಿದ್ದರು.

ಇದನ್ನೂ ಓದಿ: ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ ಸಲ್ಲಿಕೆ

ಮಹಿಳೆ ಡೆತ್​ನೋಟ್​ ಕೂಡ ಬರೆದಿಟ್ಟಿದ್ದು, ಪತಿಯ ಅನೈತಿಕ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾರೆ. ಶ್ರುತಿಯ ಪತಿಯನ್ನು ವಶಕ್ಕೆ ಪಡೆದು ಬಾಗಲಗುಂಟೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ನಾಗಸಂದ್ರದ ರಾಮಯ್ಯ ಲೇಔಟ್‌ನಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಆ ಸಮಯದಲ್ಲಿ ಮಹಿಳೆಯ ಪತಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *