ಚಿಕ್ಕಮಗಳೂರು :(ಫೆ.18) ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಸಹೋದರನ ಅತ್ತೆಯನ್ನು ಕೊಲೆ ಮಾಡಿದ್ದ ಆರೋಪಿ ಶಶಿಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿ : ಗುರುವಾಯನಕೆರೆ – ಉಪ್ಪಿನಂಗಡಿಯ 6 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ..!*
ಆರೋಪಿ ಶಶಿಧರ್ ಕುಡಿದ ಮತ್ತಿನಲ್ಲಿ ಬುದ್ದಿ ಹೇಳಿದ ಕಾರಣಕ್ಕೆ ಫೆ. 16 ರಂದು ಸಹೋದರನ ಅತ್ತೆ ಯಮುನಾ (65) ಅವರನ್ನು ಶಶಿಧರ್ ಎಂಬ ವ್ಯಕ್ತಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ.


ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದ. ಈ ಸಂಬಂಧ ಬಣಕಲ್ ಪೊಲೀಸರು ತನಿಖೆ ಆರಂಭಿಸಿದ್ದರು, ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು, ಫೆ.18 ರಂದು ಬೆಳಗ್ಗೆ ಭಾರತೀಬೈಲು ಕಾಫಿತೋಟದಲ್ಲಿ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
