Sun. Feb 23rd, 2025

Murder Case: ಗೋವಾದಲ್ಲಿ ಐರಿಷ್‌ ಯುವತಿಯ ರೇಪ್‌& ಮರ್ಡರ್‌ ಕೇಸ್‌ -ಗೋವಾ ನಿವಾಸಿಗೆ ಜೀವಾವಧಿ ಶಿಕ್ಷೆ?!!

Murder Case:(ಫೆ.18)ಐರಿಷ್‌-ಬ್ರಿಟಿಷ್‌ ಪ್ರವಾಸಿ ಯುವತಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 31 ವರ್ಷದ ವಿಕಾಸ್ ಭಗತ್‌ಗೆ ಸುಮಾರು 8 ವರ್ಷಗಳ ಬಳಿಕ ಗೋವಾ ಕೋರ್ಟ್‌ (Goa Court) ಕಠಿಣ ಶಿಕ್ಷೆ ವಿಧಿಸಿದೆ. ಅಪರಾಧಿ ವಿಕಾಸ್‌ 2017ರಲ್ಲಿ ಎಸಗಿದ ಕೃತ್ಯಕ್ಕಾಗಿ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿ ಅಂತಿಮ ತೀ‌ರ್ಪು ಪ್ರಕಟಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರು : ಅತ್ತೆಯನ್ನು ಕೊಲೆ ಮಾಡಿದ್ದ ಆರೋಪಿ ಶಶಿಧ‌ರ್ ಆತ್ಮಹತ್ಯೆ

2017ರ ಮಾರ್ಚ್‌ ತಿಂಗಳಲ್ಲಿ 28 ವರ್ಷ ವಯಸ್ಸಿನ ಐರಿಷ್-ಬ್ರಿಟಿಷ್ ಯುವತಿ ಗೋವಾ ಪ್ರವಾಸಕ್ಕೆ ಬಂದಿದ್ದರು. ಮಾರ್ಚ್‌ 14ರಂದು ದಕ್ಷಿಣ ಗೋವಾದ ಕ್ಯಾನಕೋನಾ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪ್ರವಾಸಿ ಯುವತಿಯ ಶವ ಕೊಲೆ ಮತ್ತು ಅತ್ಯಾಚಾರ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಶುಕ್ರವಾರ ಅಪರಾಧಿ ಎಂದು ಘೋಷಿಸಿತ್ತು. ಇಂದು ಶಿಕ್ಷೆ ಪ್ರಕಟ ಮಾಡಿತು.

ಶುಕ್ರವಾರ ಕೋರ್ಟ್‌ ತೀರ್ಪು ಹೊರಬೀಳುತ್ತಿದ್ದಂತೆ ಸಂತ್ರಸ್ತೆ ಕುಟುಂಬಸ್ಥರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು. ಡೇನಿಯಲ್‌ (ಸಂತ್ರಸ್ತೆ ಹೆಸರು ಬದಲಾಯಿಸಲಾಗಿದೆ) ನಮ್ಮ ಮಗಳಿದ್ದಂತೆ, ಆಕೆಯ ಪರ ನ್ಯಾಯಕ್ಕಾಗಿ ಹೋರಾಡಿದ ಎಲ್ಲರಿಗೂ ಧನ್ಯವಾದಗಳು, ನಾವು ಕೃತಜ್ಞರಾಗಿರುತ್ತೇವೆ ಎಂದು ಭಾವುರಾಗಿದ್ದಾರೆ.

ಏನಿದು ಕೇಸ್‌?
2017ರ ಮಾರ್ಚ್‌ನಲ್ಲಿ ದಕ್ಷಿಣ ಗೋವಾದ ಅರಣ್ಯ ಪ್ರದೇಶದಲ್ಲಿ 28 ವರ್ಷದ ಸಂತ್ರಸ್ತೆಯ ಮೃತದೇಹ ಪತ್ತೆಯಾಗಿತ್ತು. ದೇಹದ ಮೇಲೆ ಒಂದು ತುಂಡು ಬಟ್ಟೆ ಸಹ ಇಲ್ಲದೇ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ತಲೆ ಮತ್ತು ಮುಖದ ಭಾಗ ಗಾಯಗೊಂಡ ಸ್ಥಿತಿಯಲ್ಲಿತ್ತು. ಈ ಸಂಬಂಧ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿದ್ದರು.

ಸಂತ್ರಸ್ತೆ ಪರ ವಕೀಲ ವಿಕಾಸ್‌ ವರ್ಮಾ ವಾದ ಮಂಡಿಸಿದರು. ಯುವತಿಯ ಮೇಲೆ ಅತ್ಯಾಚಾರ ಎಸಗಿರುವುದನ್ನು ಫೋರೆನ್ಸಿಕ್‌ ವರದಿಗಳು ದೃಢಪಡಿಸಿವೆ. ಅತ್ಯಾಚಾರ ಎಸಗಿದ ಬಳಿಕ ಆಕೆಯ ಮುಖವನ್ನು ಬಿಯರ್‌ ಬಾಟಲಿಯಿಂದ ಜಜ್ಜಿದ್ದಾರೆ. ಈ ಕೃತ್ಯಕ್ಕೆ ಯಾವುದೇ ಕಾರಣಕ್ಕೂ ಕ್ಷಮೆ ನೀಡದಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

Leave a Reply

Your email address will not be published. Required fields are marked *