ಬಂಟ್ವಾಳ :(ಫೆ.19) ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ 46 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗೆ ಮೂವರು ಶಿಕ್ಷಕರನ್ನು ಶಿಕ್ಷಣ ಇಲಾಖೆ ನಿಯೋಜಿಸಿತ್ತು.

ಇದನ್ನೂ ಓದಿ: ಬೆಳ್ತಂಗಡಿ: ನೇಣುಬಿಗಿದುಕೊಂಡು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಮುಖ್ಯ ಶಿಕ್ಷಕಿ ಅನಿತಾ,ಲವಿನಾ ಮತ್ತು ಸುಮಯ್ಯ, ಮುಖ್ಯ ಶಿಕ್ಷಕಿ ಅನಿತಾ ಮತ್ತು ಸುಮಯ್ಯ ನಡುವೆ ಮನಸ್ತಾಪ ಇತ್ತು ಎಂದು ಹೇಳಲಾಗಿದ್ದು, ಈ ಹಿನ್ನಲೆ ಇಬ್ಬರು ಪ್ರತಿದಿನ ಶಾಲೆಯಲ್ಲೇ ಜಗಳವಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದರಿಂದ ಬೇಸತ್ತ ವಿದ್ಯಾರ್ಥಿಗಳಿಂದ ಸೀದಾ ಮನೆಯಲ್ಲಿ ಪೋಷಕರಿಗೆ ದೂರು ನೀಡಿದ್ದಾರೆ. ಮಕ್ಕಳ ದೂರಿನ ಹಿನ್ನಲೆ ಶಾಲೆಗೆ ಭೇಟಿ ನೀಡಿ ಪೋಷಕರು ಶಿಕ್ಷಕಿಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.


ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ. ಅವರ ಎದುರು ಶಿಕ್ಷಕಿಯರಿಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಬ್ಬರು ಶಿಕ್ಷಕಿಯರಿಗೆ ವಾರ್ನಿಂಗ್ ಕೊಟ್ಟಿದ್ದು, ಮುಂದೆ ಮತ್ತೆ ಗಲಾಟೆ ಆದರೆ ಇಬ್ಬರ ವಿರುದ್ದ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.


