ಉಡುಪಿ :(ಫೆ.20) ಯುವ ಕಲಾವಿದನೊಬ್ಬ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ಸಂಭವಿಸಿದೆ.

ಇದನ್ನೂ ಓದಿ: ಉಜಿರೆ: ಡಾ.ಬಿ. ಯಶೋವರ್ಮ ಅವರ ಸ್ಮರಣಾರ್ಥ ಉಪನ್ಯಾಸದಲ್ಲಿ ಪರಿಸರ ತಜ್ಞ ಶಿವಾನಂದ ಕಳವೆ ಅಭಿಪ್ರಾಯ
ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32) ಆತ್ಮಹತ್ಯೆಗೈದಿರುವ ಯುವಕ
ಘಟನೆ ನಡೆದ ಕೆಲವು ಹೊತ್ತಿನಲ್ಲಿಯೇ ನೇಣುಕುಣಿಕೆಯಿಂದ ಇಳಿಸಿದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು.




ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ನಗರ ಪೊಲೀಸ್ ಠಾಣೆಯ ಎ. ಎಸ್. ಐ ಸುಭಾಸ್ ಕಾಮತ್, ಹೆಡ್ ಕಾನ್ಸ್ಟೇಬಲ್ ಹರೀಶ್ ಮಾಳ, ಜಯಕರ್ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು.
