ಮಾಲಾಡಿ:(ಫೆ.21) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಘಟನೆ ಮಾಲಾಡಿಯ ಕೊಲ್ಪೆದಬೈಲಿನಲ್ಲಿ ನಡೆದಿದೆ.

ಇದನ್ನೂ ಓದಿ: Love marriage: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ
ಕೊಲ್ಪೆದಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಉರುಳಿಬಿದ್ದಿದೆ.


ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಪುಂಜಾಲಕಟ್ಟೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


