ನೆಲ್ಯಾಡಿ :(ಫೆ.21) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ
ನೆಲ್ಯಾಡಿ ಗ್ರಾಮದ ಪುಚ್ಚೇರಿ ನಿವಾಸಿ ವಸಂತ ಪಿ ಹಾಗೂ ಶ್ರೀಮತಿ ಕೇಸರಿ ದಂಪತಿ ಪುತ್ರ ಚೇತನ್ ಪಿ ವಿ (24ವ.) ಮೃತ ಪಟ್ಟ ಯುವಕ. ಈತ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದು,
ಡಿ.24 ರಂದು ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.