ಸುಬ್ರಹ್ಮಣ್ಯ:(ಫೆ.21) ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಫೆ. 20 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಇದನ್ನೂ ಓದಿ: ಕೊಲ್ಲೂರು: ತೆಂಗಿನಮರದಲ್ಲಿ ಇರುವಾಗಲೇ ತೆಂಗಿನಕಾಯಿ ತಲೆಗೆ ಬಿದ್ದು ವ್ಯಕ್ತಿ ಮೃತ್ಯು!!!
ಎಸ್.ಜಾನಕಿ ಅವರಿಗೆ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹರೀಶ ಇಂಜಾಡಿ ಅವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಶಿಷ್ಟಾಚಾರ ವಿಭಾಗದ ಜಯರಾಮ ರಾವ್, ಯಜ್ಞೇಶ್ ಆಚಾರ್, ಮಹೇಶ್ ಸೇರಿದಂತೆ ಮತ್ತಿತರರು ಜೊತೆಗಿದ್ದರು.




