ನಾವಳೆ (ಪೆ. 22 ): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ- ಶಿಶಿಲ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 30ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಫೆಬ್ರವರಿ. 22 ರಂದು ಹತ್ಯಡ್ಕ ಗ್ರಾಮದ ಅಂಗನವಾಡಿ ಕೇಂದ್ರ ನಾವಳೆ- ಪಾಲೆಂಜದಲ್ಲಿ ನಡೆಯಿತು.

ಇದನ್ನೂ ಓದಿ: ಉಡುಪಿ: ದುಷ್ಕರ್ಮಿಗಳಿಂದ ಶಿಲುಬೆ ಧ್ವಂಸ
ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಶ್ರೀ ಪ್ರಕಾಶ್ ಪಿಲಿಕಬೆ ಒಂದು ತಿಂಗಳ ಉಚಿತ ಹೊಲಿಗೆ ತರಬೇತಿಯನ್ನು ಪಡೆದುಕೊಂಡು ಸ್ವಾವಲಂಬಿ ಜೀವನವನ್ನು ನಡೆಸಿ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬಹುದು ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಶಿಬಿರಾರ್ಥಿಗಳಿಗೆ ಶುಭಹಾರೈಸಿ, ಮಹಿಳೆಯರಿಗೆ ಯಾವುದಾದರೂ ಒಂದು ಸ್ವ ಉದ್ಯೋಗ ಇದ್ದರೆ ಇಡೀ ಜಗತ್ತಿನಲ್ಲೇ ಸಾಧನೆಯನ್ನು ಮಾಡಬಹುದು, ಇನ್ನು ಸ್ವ ಉದ್ಯೋಗವನ್ನು ಕಲಿತು ಎತ್ತರಕ್ಕೆ ಬೆಳೆಯಿರಿ ಎಂದು ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ವಿಮಲಾ ಅರ್ ಶೆಟ್ಟಿ ಮಾತನಾಡಿ, ನಾನು ಕಲಿತಂತಹ ವಿದ್ಯೆ ಇನ್ನೊಬ್ಬರಿಗೆ ದಾರಿದೀಪವಾಗಬೇಕು ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.
ಸಂಸ್ಥೆಯ ಪರವಾಗಿ ಶ್ರೀಮತಿ ವಿಮಲಾ ಆರ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಬಿರಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.


ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಕುಮಾರ್, ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ಶ್ರೀಮತಿ ನೀತಾ ರಾಧೇಶ್ ಆಚಾರ್ಯ ಮತ್ತು ಅರಸಿನಮಕ್ಕಿ ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 23 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟೈಲರಿಂಗ್ ಶಿಬಿರಾರ್ಥಿ ಶ್ರೀಮತಿ ದಿವ್ಯಜ್ಯೋತಿ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಕು. ಸುಮ ಕಾರ್ಯಕ್ರಮ ನಿರೂಪಿಸಿ, ಟೈಲರಿಂಗ್ ಶಿಬಿರಾರ್ಥಿ ಶ್ರೀಮತಿ ಕವಿತಾ ಧನ್ಯವಾದವಿತ್ತರು.
