Sun. Feb 23rd, 2025

Mangaluru: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು (ಫೆ.22): ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳು ವಶಕ್ಕೆ ಪಡೆದಿದ್ದಾರೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ದಾರೆ.

ಇದನ್ನೂ ಓದಿ : ಪೆರ್ಲ: ಕೊಳದಲ್ಲಿ ಬಿದ್ದು ತಾಯಿ ಹಾಗೂ ಎರಡು ವರ್ಷದ ಮಗು ಮೃತ್ಯು

ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಮತ್ತು ಸುಮಾ ಆಚಾರ್ಯ ಹೆಸರಿನ ಚೀಟಿ ಕಾಳಿಕಾಂಬ ದೇವಿ ಕೊರಳಿಗೆ ಹಾಕಲಾಗಿತ್ತು. ಬಲಿ ನೀಡಿದ್ದ ಕುರಿಗಳ ರಕ್ತವನ್ನು ಸ್ನೇಹಮಯಿ, ಗಂಗರಾಜು ಫೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ್ ಮೊಬೈಲ್​ನಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ​​ನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಪ್ರಕರಣ?
ಮಸಾಜ್ ಪಾರ್ಲರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ​ಸ್ಫೋಟಕ ಅಂಶ ಪೊಲೀಸರಿಗೆ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿತ್ತು. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆ ಪೊಲೀಸರಿಗೆ ಆರೋಪಿಗಳು ವಾಮಾಚಾರ ಮಾಡಿಸಿರುವುದು ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯಲ್ಲಿ ಎಂದು ತಿಳಿದುಬಂದಿದೆ.

ಮಸಾಜ್ ಪಾರ್ಲರ್​ನಲ್ಲಿ ​​ಗಲಾಟೆಗೆ ಕಾರಣವೇನು?
ರಾಮ ಸೇನಾ ಕಾರ್ಯಕರ್ತರು ಜನವರಿ 30 ರಂದು ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್​ ಮೇಲೆ ಏಕಾಏಕಿ ದಾಳಿ ಮಾಡಿದ್ದರು. ಪಾರ್ಲರ್​ನಲ್ಲಿ ಅನೈತಿಕ ಚಟುವಟಿಕೆಯ ಆರೋಪಿಸಿ ದಾಳಿ ಮಾಡಿದ್ದರು. ಪಾರ್ಲರ್​ನ ಪೀಠೋಪಕರಣ, ಕನ್ನಡಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪುಡಿ ಗೈದು ದಾಂಧಲೆ ಎಸಗಿದ್ದರು.

ಈ ವೇಳೆ ಯಾವುದೇ ಗ್ರಾಹಕರು ಇಲ್ಲವಾಗಿದ್ದು, ಸೆಲೂನ್​ನಲ್ಲಿದ್ದ ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ದಾಳಿಯ ವಿಡಿಯೋಗಳು ಲಭ್ಯವಾಗಿದ್ದು, 9 ರಿಂದ 10 ಕಾರ್ಯಕರ್ತರು ದಾಳಿ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಘಟನೆ ಬೆನ್ನಲ್ಲೇ ಮಾಲೀಕರು ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಘಟನಾ ಸ್ಥಳಕ್ಕೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಆಗಮಿಸಿ ಮಾಹಿತಿ ಪಡೆದಿದ್ದು, ಮಹಿಳಾ ಸಿಬ್ಬಂದಿ ಹೇಳಿಕೆ ದಾಖಲಿಸಿಕೊಂಡಿದ್ದರು. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಪೊಲೀಸರು ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *