ಶಿರಸಿ(ಫೆ .22): ಶಿರಸಿ ತಾಲೂಕಿನ ಶ್ರೀ ನಾರಾಯಣ ಆರ್ ಕೋಮಾರ್ ಇವರು ಶಿರಸಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಡೆಯುತ್ತಿರುವ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥದ ಸಂದರ್ಭದಲ್ಲಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ. 51,000/- ದ ಚೆಕ್ ನೀಡಿ ಶುಭಹಾರೈಸಿದರು.

ಇದನ್ನೂ ಓದಿ: Sirsi: ಶಿರಸಿಯ ಶ್ರೀ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ
ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿರಸಿ ರೋಟರಿ ಕ್ಲಬ್ ಅಧ್ಯಕ್ಷರಾದ ರೊ| ಡಾ. ಸುಮನ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್ ಮ್ಯಾನ್ ರೊ| ಮಹೇಶ್ ತೆಲಂಗ ಉಪಸ್ಥಿತರಿದ್ದರು.




