ಉಡುಪಿ:(ಫೆ.22) ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೋನ್ (58ವ) ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯರಿಗೆ ಬೆಂಗಳೂರು ಸೇಫ್ ಸಿಟಿ ಅಲ್ಲ
ಕುಡಿತದ ಚಟ ಹೊಂದಿದ್ದ ಎಂದು ತಿಳಿದುಬಂದಿದೆ.
ತನಿಖಾ ಸಹಾಯಕ ಮಾಲಿಂಗ ಪತ್ರೊಟ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವದ ಮರಣೋತ್ತರ ಪರೀಕ್ಷೆ ನಡೆಸಲು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.




