ಬಂಟ್ವಾಳ:(ಫೆ.24) ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ.

ಇದನ್ನೂ ಓದಿ: ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ
ವಾಮದಪದವು ನಿವಾಸಿ ಸುಮತಿ (91) ಅವರು ಮೃತಪಟ್ಟ ಮಹಿಳೆಯಾಗಿದ್ದಾರೆ. ಸುಮತಿ ಅವರು ಇವರ ಮಗ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು.
ಫೆ. 23 ರ ಸುಮಾರು 6.45 ರ ಸಮಯದಲ್ಲಿ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಕಾರು ಚಲಾಯಿಸಿಕೊಂಡು ಬಂದ ಶೋಭಾ ಅವರು ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಅಂಗಡಿಯೊಳಗೆ ನುಗ್ಗಿದೆ.



ತೀವ್ರವಾಗಿ ಗಾಯಗೊಂಡಿದ್ದ ವೃದ್ದೆಯನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 11.45 ರ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಇವರು ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಅಪಘಾತ ನಡೆಯುವ ದೃಶ್ಯ ಸಿ.ಸಿ.ಟಿ.ವಿ ಯಲ್ಲಿ ಸೆರೆಯಾಗಿದ್ದು,ಇದೀಗ ಪುಲ್ ವೈರಲ್ ಆಗಿದೆ. ಕಾರು ವೇಗವಾಗಿ ಬಂದು ಅಂಗಡಿಯೊಳಗೆ ನುಗ್ಗಿದ ದೃಶ್ಯ ಹಾಗೂ ಅಂಗಡಿಯ ಹೊರಗಡೆ ಕುಳಿತುಕೊಂಡಿದ್ದ ಅಜ್ಜಿಗೆ ಡಿಕ್ಕಿ ಹೊಡೆಯುವ ದೃಶ್ಯ ಕೂಡ ಇದರಲ್ಲಿ ಸೆರೆಯಾಗಿದೆ.
ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
