Wed. Feb 26th, 2025

Bantwal: ಬ್ರಹ್ಮರಕೊಟ್ಲು ಟೋಲ್‌ಗೇಟ್‌ ವಿರುದ್ಧ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಎಸ್‌ಡಿಪಿಐ

ಬಂಟ್ವಾಳ,(ಫೆ.25): ವಿವಾದಿತ ಮತ್ತು ಅಕ್ರಮವಾಗಿರುವ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿಸಿ ಇಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಳಿ ಧರಣಿ ಸತ್ಯಾಗ್ರಹದ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಮುಂದುವರಿಸಿದೆ.

ಇದನ್ನೂ ಓದಿ: Puttur: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ

ನ್ಯಾಯವಾದಿಗಳು ಹಾಗೂ ಕ್ರೈಸ್ತ ಧರ್ಮ ಗುರುಗಳಾದ ಜೆರಾಲ್ಡ್ ಸಿಕ್ವೇರಾ ರವರು ಬ್ಯಾಂಡ್ ಬಾರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು.

ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರರೂ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರು ಮುಖ್ಯ ಭಾಷಣಗೈದರು.

ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರಾದ ಆಲ್ಫೋನ್ಸ್ ಫ್ರಾಂಕೋ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಹಾಗೂ ಇತರ ಜಿಲ್ಲಾ ನಾಯಕರು,ಕಾರ್ಯಕರ್ತರು, ಹಲವು ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು, ನಿತ್ಯ ಸವಾರ ವಾಹನ ಚಾಲಕ ಮಾಲಕರು ಸಹಿತ ಹಲವರು ಉಪಸ್ಥಿತರಿದ್ದರು‌.

Leave a Reply

Your email address will not be published. Required fields are marked *