ಗುಂಡ್ಯ:(ಫೆ.25) ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ.

ಇದನ್ನೂ ಓದಿ: Kerala: ಸಹೋದರ, ಗೆಳತಿ ಸೇರಿ ಐದು ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಿದ 23 ವರ್ಷದ ಯುವಕ
ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಪುತ್ತೂರಿನ ಶವಗಾರಕ್ಕೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


