Wed. Feb 26th, 2025

Venur: ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿ – 5 ವರ್ಷದ ಬಾಲಕ ಮೃತ್ಯು!!

ವೇಣೂರು:(ಫೆ.25) ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಘಟನೆ ವೇಣೂರಿನ ಅಂಡಿಂಜೆಯಲ್ಲಿ ಫೆ. 24ರಂದು ಸಂಜೆ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಟ್ ಆದ ಮಂಗಳೂರಿನ ಹುಡುಗಿ!!

ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು ಶರ್ಮ(5 ವ) ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು