ಮುಲ್ಕಿ:(ಫೆ.26) ಚಾಲಕಿಯ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಹಳೆಯಂಗಡಿ ಸಮೀಪದ ಪಾವಂಜೆ ಬಳಿ ನಡೆದಿದೆ.

ಇದನ್ನೂ ಓದಿ: ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ
ಕಾರು ಚಾಲಕಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳು ಮಹಿಳೆಯನ್ನು ಉಡುಪಿ ಜಿಲ್ಲೆಯ ಅಂಬಲಪಾಡಿ ನಿವಾಸಿ ಲಾಸ್ಯ ಡಿ ಹೆಗ್ಡೆ(37)ಎಂದು ಗುರುತಿಸಲಾಗಿದೆ.

ಲಾಸ್ಯರವರು ಉಡುಪಿ ಕಡೆಯಿಂದ ಮಂಗಳೂರಿನ ಕಡೆಗೆ ತಮ್ಮ ಕಾರಿನಲ್ಲಿ ಹೋಗುತ್ತಿದ್ದು ಹಳೆಯಂಗಡಿ ಸಮೀಪದ ಪಾವಂಜೆ ಬಳಿ ಕಾರು ಚಾಲಕಿಯ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮಣ್ಣಿನ ದಿಬ್ಬಕ್ಕೆ ಹೋಗಿ ಪಲ್ಟಿಯಾಗಿ ಬಿದ್ದಿದೆ.


ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಸಂಪೂರ್ಣ ಹಾನಿಯಾಗಿದ್ದು ಕಾರಿನ ಒಳಗಡೆ ಸಿಲುಕಿಕೊಂಡಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಮುಕ್ಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಹಾಗೂ ಹೆದ್ದಾರಿ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾರನ್ನು ಕ್ರೇನ್ ಮೂಲಕ ಸ್ಥಳದಿಂದ ತೆರವುಗೊಳಿಸಲಾಯಿತು. ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
