Thu. Feb 27th, 2025

Belthangady: ಚಾರ್ಮಾಡಿ ಘಾಟ್ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್!! – ಆಮೇಲೆನಾಯ್ತು ?!!

ಬೆಳ್ತಂಗಡಿ:(ಫೆ.27): ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ.

ಇದನ್ನೂ ಓದಿ: ಪುಣೆ: ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನೊಳಗೆ ಮಹಿಳೆಯ ಮೇಲೆ ಅತ್ಯಾಚಾರ

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.

ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು