ಪುತ್ತೂರು:(ಫೆ.27) 9 ವರ್ಷದ ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ: ಧರ್ಮಸ್ಥಳದಲ್ಲಿ ಬೃಹತ್ ಘಂಟೆಯ ಉದ್ಘಾಟನೆ
ಮಹಮ್ಮದ್ ಇರ್ಷಾದ್(20) ಲೈಂಗಿಕ ಕಿರುಕುಳ ನೀಡಿದ ಆರೋಪಿ.
ಮಹಮ್ಮದ್ ಇರ್ಷಾದ್ ನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿ 9 ವರ್ಷದ ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ ಪೋಷಕರು




ಮತ್ತು ಅಪ್ರಾಪ್ತೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
