ಬೆಂಗಳೂರು:(ಫೆ.28) ಬೆಂಗಳೂರಿನಲ್ಲಿ ಎರಡು ಬಿಎಂಟಿಸಿ ಬಸ್ ಮಧ್ಯೆ ಸಿಲುಕು ಆಟೋ ಅಪ್ಪಚ್ಚಿಯಾಗಿದೆ. ಪರಿಣಾಮ ಘಟನೆಯಲ್ಲಿ ಆಟೋ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾನೆ. ಇಂದು(ಫೆಬ್ರವರಿ 28) ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಸಮೇತ ಇಬ್ಬರು ಅಪ್ಪಚ್ಚಿಯಾಗಿ, ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ
ಆಟೋ ಚಾಲಕ ವಿಜಯ್ ಕುಮಾರ್(50) ಹಾಗೂ ಪ್ರಯಾಣಿಕ ವಿಷ್ಣುಬಾಟಿಯ (70) ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಹೊಸಕೆರೆ ಹಳ್ಳಿ ಕ್ರಾಸ್ ಸೀತಾ ಸರ್ಕಲ್ ಸಮೀಪ ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಇದರ ಹಿಂದೆ ಬರುತ್ತಿದ್ದ ಆಟೋ ಬಸ್‌ಗೆ ಡಿಕ್ಕಿ ಹೊಡೆದಿದೆ.


ಮುಂದೆ ಇದ್ದ ಬಿಎಂಟಿಸಿ ಬಸ್ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂದೆ ಇದ್ದ ಆಟೋ ಡಿಕ್ಕಿ ಹೊಡೆದಿದೆ. ಅದೇ ವೇಳೆಗೆ ಹಿಂದೆ ಬರುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಬಸ್‌ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ಆಟೋದಲ್ಲಿ ಸಿಲುಕಿಗೊಂಡು ಮೃತಪಟ್ಟ ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬಿಎಂಟಿಸಿ ಬಸ್ ಜಪ್ತಿ ಮಾಡಿ ಚಾಲಕನನ್ನು ಸಹ ವಶಕ್ಕೆ ಪಡೆದು ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

