ಉಜಿರೆ:(ಫೆ.28) ಅನುಗ್ರಹ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಾಗಿದ್ದು ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭಗೊಳ್ಳಲಿದೆ.

ಒಟ್ಟು 591 ವಿದ್ಯಾರ್ಥಿಗಳು ಈ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯುತ್ತಿದ್ದು, ಒಟ್ಟು 36 ಕೊಠಡಿ ಮೇಲ್ವಿಚಾರಕರು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.



ಇದಕ್ಕೆ ಸಂಬಂಧಿಸಿದ ಪೂರ್ವ ಸಿದ್ಧತಾ ಕಾರ್ಯಗಳು ಈಗಾಗಲೇ ಪೂರ್ಣಗೊಂಡಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಪರೀಕ್ಷಾ ಅಧೀಕ್ಷಕರಾದ ಫಾ! ವಿಜಯ್ ಲೋಬೋ ಅವರು ಎಲ್ಲಾ ಮೇಲ್ವಿಚಾರಕರಿಗೆ ಸೂಕ್ತವಾದ ಮಾರ್ಗದರ್ಶನ ನೀಡಿದರು.

