ಕಾಸರಗೋಡು:(ಮಾ.1) ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಕಾಸರಗೋಡು ತ್ವರಿತಗತಿ ವಿಶೇಷ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಪುಣೆ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ
ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವರ್ಕಾಡಿ ಉದ್ದಂಬೆಟ್ಟು ನಿವಾಸಿ ವಿಕ್ಟರ್ ಮೊಂತೆರೊ (43) ಎಂಬಾತನಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

4.5 ಲಕ್ಷ ದಂಡವನ್ನೂ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 18 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.



ಸೆಪ್ಟೆಂಬರ್ 10, 2021 ರ ಮೊದಲು ನಡೆದ ಘಟನೆಯ ಆಧಾರದ ಮೇಲೆ ಮಂಜೇಶ್ವರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
