ಮಂಗಳೂರು (ಮಾ.1) : ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ನಿವಾಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಎಂಬ ಯುವಕ ಇತ್ತೀಚೆಗೆ ನಾಪತ್ತೆಯಾಗಿದ್ದು,

ನಾಪತ್ತೆಯಾಗಿ ದಿನಗಳು ಕಳೆದರೂ ಕೂಡ ಪೋಲಿಸ್ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿಲ್ಲದೆ ಇರುವುದೂ ಇನ್ನೂ ಹಲವು ಸಂಶಯಗಳಿಗೆ ಕಾರಣವಾಗಿದೆ.

ಈ ಪ್ರಕರಣದ ನಿಜಾಂಶವನ್ನು ಹಾಗೂ ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸಿ ಪಾರದರ್ಶಕ ತನಿಖೆ ನಡೆಸುವಂತೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತು ಮಂಗಳೂರು ಜಿಲ್ಲಾ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.



