ಶಿವಮೊಗ್ಗ:(ಮಾ.1) ಸತ್ತು ಬದುಕಿ ವಿಸ್ಮಯ ಮೂಡಿಸಿದ್ದ ಗಾಂಧಿನಗರದ ವಾಸಿ ಮೀನಾಕ್ಷಿ (52) ಬುಧವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇವರಿಗೆ ಪತಿ ಗುತ್ತಿಗೆದಾರ ಸುಬ್ರಮಣಿ, ಮೂವರು ಪುತ್ರರು ಇದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ
ಇವರು ಮಂಗಳವಾರ ಬೆಳಗ್ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರೆಂದು ಮೃತದೇಹವನ್ನು ಮನೆಗೆ ತಂದಾಗ ಕಣ್ತೆರೆದು ನೋಡಿ ಉಸಿರಾಡಿದ್ದರು.
ಕುಟುಂಬದವರು ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ನಿಧನರಾಗಿದ್ದಾರೆ.